Sun,Jul26,2026
ಕನ್ನಡ / English

ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಖರ್ಗೆ ಮುಂದಿನ ಸಿಎಂ ಎಂದು ಘೋಷಿಸಲಿ | ಜನತಾ ನ್ಯೂಸ್

15 Jul 2021

ಬೀದರ್ : ಕಾಂಗ್ರೆಸ್ ಪಕ್ಷದಲ್ಲಿ ಒಳಜಗಳ ಮಧ್ಯ ದಲಿತ ಮುಖ್ಯಮಂತ್ರಿ ಚರ್ಚೆಯೂ ಪ್ರಾರಂಭವಾಗಿದೆ. ಕಾಂಗ್ರೆಸ್‌ ಗೆ ಶಕ್ತಿ ಇದ್ದರೆ, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಮನಸ್ಸಿದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿನ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.

ಬೀದರ್ ಹೊರವಲಯದ ನೌಬಾದ್‌ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಬಿಜೆಪಿ ಜಿಲ್ಲಾ ಕಚೇರಿಯ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿದ್ಧರಾಮಯ್ಯನವರು ದಲಿತ ಸಿಎಂಗೆ ಬೆಂಬಲ ಇದೆ ಎನ್ನುತ್ತಾರೆ. ಆದರೆ, ಡಾ. ಜಿ. ಪರಮೇಶ್ವರ ಅವರನ್ನು ಸೋಲಿಸಲು ಎಲ್ಲವನ್ನೂ ಮಾಡಿದ್ದಾರೆ. ಸಿದ್ದರಾಮಯ್ಯನವರು ಹೇಳುವುದೊಂದು, ಮಾಡುವುದೊಂದು; ಅದು ಅವರ ಚಾಳಿ ಎಂದು ಕಟೀಲ್ ಜರಿದರು. ಹಿಂದೆ ಸಿದ್ದರಾಮಯ್ಯನವರು ಅಹಿಂದ ಚಳವಳಿ ಪ್ರಾರಂಭಿಸಿ, ಸಿಎಂ ಆದರು. ಬಳಿಕ ಅಹಿಂದರನ್ನು ಮರೆತರು. ಅವರಿಗೆ ಯಾವುದೇ ಲಾಭ ಮಾಡಲಿಲ್ಲ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವದಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಯಾರು ಬೇಕಾದರೂ ಹೇಳಬಹುದು. ಆದರೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷದ ರಾಷ್ಟ್ರೀಯ ನಾಯಕರು, ಶಾಸಕಾಂಗ ಪಕ್ಷವು ತೀರ್ಮಾನಿಸುತ್ತದೆ. ಇದನ್ನು ಹೀಗೆ ಹೇಳುವವರ ಗಮನದಲ್ಲಿರಬೇಕು. ನಮ್ಮ ಪಕ್ಷದ ವಿಚಾರ, ಸಿದ್ಧಾಂತ ಗಮನದಲ್ಲಿರಬೇಕು ಎಂದು ಕಿವಿ ಮಾತು ಹೇಳಿದರು. ಬಿಜೆಪಿಯಲ್ಲಿ ನಾನೇ ಮುಂದಿನ ಸಿಎಂ ಎಂದು ಬಸವರಾಜ ಪಾಟೀಲ್ ಯತ್ನಾಳ್ ಹೇಳುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

RELATED TOPICS:
English summary :Nalin Kumar Kateel

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...