Sun,Jul26,2026
ಕನ್ನಡ / English

ಬುದ್ದಿ ಹೇಳಲು ಬಂದ ಪತ್ನಿಯ ಪೋಷಕರಿಗೆ ಬೆಂಕಿ ಹಚ್ಚಿದ ಪತಿ, ಒಬ್ಬ ಸಜೀವ ದಹನ, ಮೂವರು ಗಂಭೀರ | JANATA NEWS

29 Jun 2022

ಯಾದಗಿರಿ : ವ್ಯಕ್ತಿಯೋರ್ವ ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಓರ್ವ ಸಾವನ್ನಪ್ಪಿದು ಮೂವರು ಗಂಭೀರ ಗಾಯಗೊಂಡಿರುವ ಅಮಾನುಷ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ನಾಗಪ್ಪ ಹಗರಗುಂಡ (35) ಸಾವನ್ನಪ್ಪಿದ ದುರ್ದೈವಿಯಾಗಿದ್ದು, ಕೃತ್ಯ ಎಸಗಿದ ಆರೋಪಿ ಶರಣಪ್ಪ ಹಗರಗುಂಡ ಎಂಬ ವ್ಯಕ್ತಿ ಯಾಗಿದ್ದಾನೆ. ಘಟನೆಯಲ್ಲಿ ಸುಟ್ಟು ಗಾಯಾಳುಗಳಾದ ಶರಣಪ್ಪ ಪತ್ನಿ ಹುಲಿಗೆಮ್ಮಳ ತಂದೆ ಸಿದ್ದರಾಮಪ್ಪ ಮುರಾಳ (62), ಮುತ್ತಪ್ಪ ಮುರಾಳ, ನಾಗಪ್ಪ ಶರಣಪ್ಪ ಸರೂರ ಎಂದು ತಿಳಿದು ಬಂದಿದೆ.

ಕೆಲ ದಿನಗಳಿಂದ ಪತಿ ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ಜಗಳವಾಗಿತ್ತು. ಈ ಸಂಬಂಧ ಶರಣಪ್ಪನಿಗೆ ಬುದ್ಧಿ ಹೇಳಲು ಪತ್ನಿ ಹುಲಿಗೆಮ್ಮಳ ತಂದೆ ಹಾಗೂ ಮೂವರು ಸಂಬಂಧಿಕರು ಬಂದಿದ್ದರು. ಈ ವೇಳೆ ಶರಣಪ್ಪ ನಾಲ್ಕು ಜನರನ್ನು ಕೋಣೆಯಲ್ಲಿ ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹುಲಿಗಮ್ಮ ರಾಯಚೂರು ಜಿಲ್ಲೆಯ ಲಿಂಗಸೂರಿನ ಕೆಎಸ್ಆರ್ಟಿಸಿ ಯಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಳು. ಹುಲಿಗೆಮ್ಮ ಕಳೆದ 14 ತಿಂಗಳಿನಿಂದ ಬೇರೆ ಕಡೆ ಮನೆ ಮಾಡಿಕೊಂಡಿದ್ದಳು. ಶರಣಪ್ಪ ಹೆಂಡತಿ ಹುಲಿಗೆಮ್ಮಗೆ ವಿಚ್ಚೇದನ ಕೇಳಿದ್ದನು. ಆದರೆ ಹುಲಿಗೆಮ್ಮ ವಿಚ್ಚೇದನ ನೀಡಲು ನಿರಾಕರಿಸಿದ್ದಳು. ಹುಲಿಗೆಮ್ಮ ಪತಿಯೊಂದಿಗೆ ಮಾತನಾಡಲು ಹುಲಿಗಮ್ಮ ತಂದೆ ಹಾಗೂ ಸಂಬಂಧಿಕರು ಇಂದು ಬೆಳಗ್ಗೆ ಶರಣಪ್ಪನ ಮನೆ ನಾರಾಯಣಪುರಕ್ಕೆ ಬಂದಿದ್ದರು. ಆದರೆ ಹುಲಿಗೆಮ್ಮ ನಾರಾಯಣಪುರಕ್ಕೆ ನಾನು ಬರಲ್ಲ ನೀವೆ ಮಾತಾಡಿ ಎಂದು, ಕೆಲಸಕ್ಕೆ ಹೋಗಿದ್ದಳು. ಜೊತೆಗೆ ಪೋಷಕರಿಗೂ ಸಹ ಮಾತಾಡಲು ಹೋಗಬೇಡಿ ಎಂದಿದ್ದಳು.

ಕೌಟುಂಬಿಕ ಸಮಸ್ಯೆ ಬಗ್ಗೆ ನ್ಯಾಯ ಪಂಚಾಯತಿ ನಡೆಸಲು ಪತ್ನಿಯ ತಂದೆ ಸಿದ್ದರಾಮಪ್ಪ ಮುರಾಳ, ಮುತ್ತಪ್ಪ ಮುರಾಳ, ನಾಗಪ್ಪ ಹಗರಗುಂಡ, ಶರಣಪ್ಪ ಸರೂರ ಎಂಬುವವರು ಬುಧವಾರ ಬೆಳಿಗ್ಗೆ ನಾರಾಯಣಪುರಕ್ಕೆ ಆಗಮಿಸಿದ್ದರು, ಇದೇ ವೇಳೆ ಮನೆಯ ಮಹಡಿ ಕೊಠಡಿಯಲ್ಲಿ ನಾಲ್ಕು ಜನರೊಂದಿಗೆ ಮಾತುಕತೆ ನಡೆಸಿದ್ದ ಆರೋಪಿ ಶರಣಪ್ಪ ಮಧ್ಯದಲ್ಲಿ ಹಿರಿಯರನ್ನು ಕರೆದುಕೊಂಡು ಬರುವುದಾಗಿ ಹೇಳಿ ಕೊಠಡಿಯಲ್ಲಿ ನಾಲ್ವರನ್ನು ಕೂಡಿ ಹಾಕಿ ಬೀಗ ಜಡೆದು ಕಿಟಕಿ ಮೂಲಕ ಅವರ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ

RELATED TOPICS:
English summary :The husband who set fire to his wife s parents who came to mind, one of them burnt alive, three serious

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...