Sun,Dec07,2025
ಕನ್ನಡ / English

ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ | JANATA NEWS

14 Oct 2022

ಉಡುಪಿ : ಭಾರತ್ ಜೋಡೋ ಯಾತ್ರೆ ಮೂಲಕ ರಾಹುಲ್ ಗಾಂಧಿ ಅವರ ಬಾಡಿ ಫಿಟ್ನೆಸ್ ಪ್ರದರ್ಶನವಾಗುತ್ತಿದೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ​ ಮಾಡಿದ್ದಾರೆ.

ದೇಶದ ನಾಯಕತ್ವ ವಹಿಸಲು ರಾಹುಲ್​ಗೆ ಸಾಧ್ಯನಾ? ಪಕ್ಷದ ನೇತೃತ್ವ ವಹಿಸದವ ದೇಶದ ನೇತೃತ್ವ ವಹಿಸಲು ಅಸಾಧ್ಯ. ಪ್ರಧಾನಿ ಮೋದಿಗೆ ಸರಿಸಾಟಿಯಾಗಲಾಗದ ರಾಹುಲ್‍ ಗಾಂಧಿ ಅವರಿಗೆ ಬಾಡಿ ಫಿಟ್ನೆಸ್ ಇದ್ದರೂ ಮೈಂಡ್ ಫಿಟ್ನೆಸ್ ಸೇರಿದಂತೆ ದೇಶವಾಳಲು ಫಿಟ್ ಇದ್ದಾರಾ ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಮೋದಿಗೆ ಸರಿಸಾಟಿಯಾಗುವ ರಾಹುಲ್ ಕನಸು ನನಸಾಗಲ್ಲ. ಬಾಡಿ ಫಿಟ್ನೆಸ್ ಇದೆ, ಮೆಂಟಲ್ ಫಿಟ್ನೆಸ್ ಇದ್ದಾರಾ? ದೇಶವನ್ನು ಆಳಲು ಮೆಂಟಲಿ ​​ಫಿಟ್ನೆಸ್​ ಇದ್ದಾರೋ ಇಲ್ವೋ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದು ಕಾಲೆಳೆದಿದ್ದಾರೆ.

ಮುಸ್ಲಿಂ ಮಹಿಳೆಗೆ ಸ್ವಾತಂತ್ರ್ಯ ಸಿಗಬೇಕಾದರೆ ಹಿಜಾಬ್​ಗೆ ಅವಕಾಶ ಕೊಡಬಾರದು, ಹಿಜಾಬ್ ಪ್ರಕರಣ ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಆಗಬಹುದು. ಇಬ್ಬರು ನ್ಯಾಯಮೂರ್ತಿಗಳು ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಂವಿಧಾನಿಕ ಪೀಠದಲ್ಲಿ ಹಿಜಾಬ್ ದೇಶಕ್ಕೆ ಬೇಕೋ ಬೇಡವೋ ಎಂದು ತೀರ್ಮಾನವಾಗುತ್ತದೆ. ಎಲ್ಲಾ ಮಹಿಳೆಯರು ಸ್ವಾತಂತ್ರ್ಯವಾಗಿ ಬದುಕಲು ನ್ಯಾಯಾಲಯ ಅವಕಾಶ ಮಾಡಿಕೊಡಬಹುದು. ಮುಸ್ಲಿಂ ಹೆಣ್ಣು ಮಕ್ಕಳು ಈ ಬಗ್ಗೆ ಗಂಭೀರವಾಗಿ ಆಲೋಚನೆ ಮಾಡಬೇಕು ಎಂದು ಸೂಚಿಸಿದರು.

ಮುಸ್ಲಿಂ ಹೆಣ್ಮಕ್ಕಳು ಈಗಲಾದರೂ ಯೋಚಿಸಬೇಕು. ಮನೆ ಮಂದಿ, ಗಂಡಸರು ಹೆಣ್ಮಕ್ಕಳಿಗೆ ಹಿಜಾಬ್ ಧರಿಸಲು ಒತ್ತಡ ಹೇರಿದರೂ ಸುಪ್ರೀಂ ಕೋರ್ಟ್ ತೀರ್ಪಿನಿಂದ ಹಿಜಾಬ್ ಧರಿಸುವ ಅಗತ್ಯವಿಲ್ಲವೆಂದಾದರೆ ಹೆಣ್ಮಕ್ಕಳಿಗೆ ಸ್ವಾತಂತ್ರ್ಯ ಸಿಗಬಹುದು. ಮುಸ್ಲಿಂ ಹೆಣ್ಮಕ್ಕಳಿಗೆ ಶಿಕ್ಷಣ, ಉದ್ಯೋಗ ಸಿಗಬೇಕು, ಸ್ವಂತ ಕಾಲಲ್ಲಿ ನಿಲ್ಲಬೇಕು. ಗಂಡಸರು ಹಾಕಿದ ತಾಳಕ್ಕೆ ಕುಣಿದು, ನಿಮ್ಮ ಇಚ್ಛೆಗೆ ವಿರುದ್ಧವಾಗಿ ನಡೆಯಬೇಡಿ. ಈಗಲಾದರೂ ಅರ್ಥ ಮಾಡಿಕೊಳ್ಳಿ ಎಂದು ಹಿಜಾಬ್ ಪರ ಹೋರಾಟದಲ್ಲಿ ಪಾಲ್ಗೊಂಡ ವಿದ್ಯಾರ್ಥಿನಿಯರಲ್ಲಿ ಮನವಿ ಮಾಡಿದರು.

RELATED TOPICS:
English summary :Rahul Gandhi body fitness is being demonstrated through Bharat Jodo Yatra

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...