Sun,Dec07,2025
ಕನ್ನಡ / English

ನಾನು ಹಿಂದು, ನಮ್ಮಪ್ಪ-ಅವ್ವನೂ ಹಿಂದು, ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? | JANATA NEWS

11 Feb 2023

ವಿಜಯಪುರ : ನಾನು ಹಿಂದೂ, ನಮ್ಮಪ್ಪ - ಅವ್ವನೂ ಹಿಂದೂ. ನಾನು ಹಿಂದೂ ಅಲ್ಲವಾ, ನಮ್ಮವ್ವ - ನಮ್ಮಪ್ಪ ಹಿಂದುಗಳಲ್ಲವಾ? ಸಿಟಿ ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಮನಾಗಿ ಬಿಡುತ್ತೇನಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಶನಿವಾರ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ಆಗಮಿಸಿದ್ದ ಅವರು ಮಾತನಾಡಿ, ನಾನು ಹಿಂದು, ನಮ್ಮವ್ವ-ನಮ್ಮಪ್ಪ ಹಿಂದು. ನನ್ನ ಹೆಸರು ಸಿದ್ದರಾಮಯ್ಯ ಎಂದಿರಿಸಿಲ್ಲವೇ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಪ್ರಶ್ನಿಸಿದರು.

ಮುಂದುವರಿದು ಹಿಂದು ಹಾಗೂ ಹಿಂದುತ್ವ ಎಂಬ ಪದದ ಬಗ್ಗೆ ನಿಮಗೆ ಗೊತ್ತಾ ಎಂದು ಮಾಧ್ಯಮ ಪ್ರತಿನಿಧಿಗಳನ್ನು ಪ್ರಶ್ನಿಸಿದರು. ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ ಎಂದರು.

ಹಿಂದುತ್ವದ ಬಗ್ಗೆ ಗೊತ್ತಿದ್ದರೆ ತಿಳಿಸಿ, ಗೊತ್ತಿಲ್ಲದಿದ್ದರೆ ಕೇಳುವುದು ಬೇಡ. ನಮ್ಮ ಸರ್ಕಾರದಲ್ಲಿ 15 ಲಕ್ಷ ಮನೆಗಳನ್ನು ಕೊಟ್ಟಿದ್ದೇವು. ಎಲ್ಲವೂ ಮುಸ್ಲಿಮರಿಗೆ ಕೊಟ್ಟಿದ್ದೇವಾ? ಕೇವಲ ಶೇ.5ರಷ್ಟು ಮಾತ್ರ ಮುಸ್ಲಿಮರಿಗೆ ಕೊಟ್ಟಿತ್ತು. ಶೇ.95ರಷ್ಟನ್ನು ಹಿಂದೂಗಳಿಗೆ ಕೊಡಲಾಗಿತ್ತು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಬಿಜೆಪಿಯವರಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ 2017ರಲ್ಲಿ ಹೇಳಿದ್ದರು. ಆದರೆ, ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದರು.

ತಮ್ಮ ಸುಳ್ಳು ಮುಚ್ಚಿಕೊಳ್ಳಲು ಬಿಜೆಪಿ ಇಲ್ಲ ಸಲ್ಲದ ಹೇಳಿಕೆ ಕೊಡುತ್ತಿದೆ. ಲಂಬಾಣಿ ಜನರಿಗೆ ತಾಂಡಾಗಳನ್ನು ಕಂದಾಯ ಗ್ರಾಮ ಮಾಡಲು ಕಾನೂನು ಮಾಡಿದ್ದು ನಾವು. ಇಲ್ಲಿ ಹಕ್ಕು ಪತ್ರ ಕೊಡಲು ಬಂದು ಯೋಜನೆ ನಮ್ಮದೆಂದರೆ? ಅಡುಗೆ ಮಾಡಿದ್ದು ನಾವು ಬಡಿಸಿಬಿಟ್ಟು ನಮ್ಮದೆಂದಂತಿದೆ ಎಂದರು.

ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಏಳು ಕೆಜಿಯಿಂದ 5 ಕೆಜಿಗೆ ಇಳಿಸಿದ್ದು ಸುಳ್ಳಾ? ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್‌ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಅಕ್ಕಿಯನ್ನು ಏಕೆ ಕೊಡುತ್ತಿಲ್ಲ? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದು ಹೇಳಿದರು.

RELATED TOPICS:
English summary :I am a Hindu, our father is also a Hindu, C.T. Do I quit being a Muslim just because Ravi says it?

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...