Sat,Oct18,2025
ಕನ್ನಡ / English

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷ | JANATA NEWS

07 Mar 2023

ದಾವಣಗೆರೆ : ಇಂದು ಹೈಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ಸಿಗುತ್ತಿದ್ದಂತೆ ಮಾಡಾಳು ಗ್ರಾಮದ ಮನೆ ಬಳಿ ಶಾಸಕ ವಿರೂಪಾಕ್ಷಪ್ಪ ಪ್ರತ್ಯಕ್ಷರಾಗಿದ್ದಾರೆ.

ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಲು ಮುಂದಾಗಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. 2-3 ದಿನಗಳಾಗದರೂ ಅವರು ಎಲ್ಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ದಾವಣಗೆರೆಯ ತಮ್ಮ ನಿವಾಸದ ಬಳಿ ಕಾಣಿಸಿಕೊಂಡಿದ್ದಾರೆ.

ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ಅವರು ವಾಪಸಾಗುತ್ತಿದ್ದಂತೆ ಬೆಂಬಲಿಗರು, ಕಾರ್ಯಕರ್ತರು ಶಾಸಕರ ನಿವಾಸದ ಬಳಿ ಜಮಾಯಿಸಿದರು.

ನಂತರ ವಿರೂಪಾಕ್ಷಪ್ಪ ಅವರು ಮಹದೇವಮ್ಮ ದೇವಿ ದರ್ಶನ ಪಡೆದರು. ಬಳಿಕ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಂಬಲಿಗರು ಮಾಡಾಳ್ ವಿರೂಪಾಕ್ಷಪ್ಪ ಪರ ಘೋಷಣೆ ಕೂಗಿದರು.

ಮಧ್ಯಂತರ ಜಾಮೀನು​ ನೀಡಿದ್ದ ಹೈಕೋರ್ಟ್​, ಮಾಡಾಳ್​ಗೆ 48 ಗಂಟೆಯೊಳಗೆ ಲೋಕಾಯುಕ್ತರ ಮುಂದೆ ಸರೆಂಡರ್​​ ಆಗುವಂತೆ ಸೂಚಿಸಿತ್ತು. ಅಲ್ಲದೇ ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದೂ ಆದೇಶಿಸಿದೆ. ಅಲ್ಲದೇ ಈ ಕುರಿತಾದ ವಿಚಾರಣೆಯನ್ನು ಮಾರ್ಚ್​ 17ಕ್ಕೆ ಮುಂದೂಡಿತ್ತು.

RELATED TOPICS:
English summary :Madal Virupakshappa appeared after getting bail

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ

ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ

33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ

ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ

ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ

ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ

ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ

ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ

ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ

ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...