Sun,Dec07,2025
ಕನ್ನಡ / English

ರಾಹುಲ್ ಗಾಂಧಿ ಬ್ರಿಟನ್​​ಗೆ ಹೋಗಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಬಾಲಿಶ ಹೇಳಿಕೆ ಖಂಡನೀಯ: ಪ್ರಲ್ಹಾದ್ ಜೋಶಿ | JANATA NEWS

07 Mar 2023

ಬಳ್ಳಾರಿ : ಬ್ರಿಟನ್​ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಅತ್ಯಂತ ಬಾಲಿಶವಾಗಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, "ಬ್ರಿಟನ್, ಅಮೆರಿಕಾ ಎಂದು ಓಡಾಡುತ್ತಿರುವ ರಾಹುಲ್ ಗಾಂಧಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೀಡುತ್ತಿರುವ ಹೇಳಿಕೆ ಖಂಡನೀಯ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ‌. ಪ್ರಪಂಚದ ಮೂರನೇ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ" ಎಂದು ಹೇಳಿದ್ದಾರೆ.

"ರಾಹುಲ್ ಗಾಂಧಿ ಅವರಿಗೆ ಮಾನಸಿಕವಾಗಿ ಏನೋ ಸಮಸ್ಯೆ ಆದ ಹಾಗಿದೆ. ಸತತ ಸೋಲಿನಿಂದ ಹತಾಶರಾಗಿ ಅವರು ದೇಶದ ಪ್ರಜಾಪ್ರಭುತ್ವದ ಬಗ್ಗೆ ಅತ್ಯಂತ ಬಾಲಿಶವಾಗಿ ಮಾತನಾಡುತ್ತಿದ್ದಾರೆ. ಮಾನಸಿಕವಾಗಿ ಅವರಿಗೆ ತೊಂದರೆ ಇದ್ದಂತೆ ಕಾಣ್ತಿದೆ. ಪ್ರತಿಪಕ್ಷಗಳ ಮೈಕ್ ಗಳು ಆಫ್ ಆಗ್ತಾ ಇವೆ ಅಂದಿದ್ದಾರೆ. ಆದರೆ ದೇಶದ ಜನರೇ ಅವರ ಮೈಕ್ ಗಳನ್ನ ಆಫ್ ಮಾಡಿದ್ದಾರೆ ಅನ್ನೋ ಸತ್ಯವನ್ನ ರಾಹುಲ್ ಗಾಂಧಿ ತಿಳಿದುಕೊಳ್ಳಬೇಕು" ಎಂದು ಲೇವಡಿ ಮಾಡಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಮೋಷನ್ ಆಫ್​​ ಥ್ಯಾಂಕ್ಸ್ ವೇಳೆ ರಾಹುಲ್ ಗಾಂಧಿ ಅವರಿಗೆ 1 ಗಂಟೆ 9 ನಿಮಿಷ ಮಾತನಾಡಲು ಸಮಯದ ಅವಕಾಶವಿತ್ತು‌. ಆದ್ರೆ ಸ್ಪೀಕರ್ ಅವರು ಅವರು 2 ಗಂಟೆ ಸಮಯ ಕೊಟ್ಟಿದ್ರು. ಸದನದಲ್ಲಿ ಪ್ರತಿಪಕ್ಷಗಳಿಗೆ ಹೆಚ್ಚಿನ ಕಾಲಾವಕಾಶ ನೀಡಲಾಗ್ತಿದೆ. ಆದರೆ, ಪ್ರತಿಪಕ್ಷಗಳೇ ಸದನದಲ್ಲಿ ಚರ್ಚಿಸದೆ ಗದ್ದಲ ಎಬ್ಬಿಸಿದ್ದನ್ನ ದೇಶದ ಜನ ನೋಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್ ನವರೇ ಎಂದು ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಹೊರದೇಶಕ್ಕೆ ಹೋಗಿ ದೇಶದ ಪ್ರಜಾಪ್ರಭುತ್ವದ ಬಗ್ಗೆ ನೆಗೆಟಿವ್ ಆಗಿ ಮಾತಾಡುವ ರಾಹುಲ್ ಗಾಂಧಿ ತಮ್ಮ ಅಜ್ಜಿ ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದು ಮರೆತಿದ್ದಾರೆ. ಇಡೀ ಪ್ರಜಾಪ್ರಭುತ್ವದ ವಿರುದ್ಧ ತುರ್ತು ಪರಿಸ್ಥಿತಿ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸಿದವರು ಕಾಂಗ್ರೆಸ್‌ನವರೇ. ಇಡೀ ಮಂತ್ರಿಮಂಡಲ ಜಾರಿ ಮಾಡಿದ ನಿರ್ಣಯಗಳನ್ನ ಹರಿದುಹಾಕುವ ಮೂಲಕ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದವರು ರಾಹುಲ್ ಗಾಂಧಿ. ಈಗ ಪ್ರಜಾಪ್ರಭುತ್ವ ತೊಂದರೆಯಲ್ಲಿದೆ ಅಂತಿದ್ದಾರೆ ಎಂದು ಪ್ರಲ್ಹಾದ್ ಜೋಶಿ ಕಿಡಿಕಾರಿದ್ದಾರೆ.

RELATED TOPICS:
English summary :Rahul Gandhi goes to Britain and makes childish statements about Indian democracy condemnable: Pralhad Joshi

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...