ರೇವಣ್ಣ ಕುಟುಂಬಕ್ಕೆ ಶಾಕ್: ಹಾಸನ ಟಿಕೆಟ್ ಸಾಮಾನ್ಯ ಕಾರ್ಯಕರ್ತನಿಗೆ ಎಂದ ಕುಮಾರಸ್ವಾಮಿ | JANATA NEWS
ಹಾಸನ : ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಜೆಡಿಎಸ್ ನಲ್ಲಿ ಹಾಸನ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಮೂಡಿದೆ.
ಪ್ರದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಪಂಚರತ್ನ ಯಾತ್ರೆ ಮೂಲಕ ಮತಗಳ ಕ್ರೋಢೀಕರಣಕ್ಕೆ ಮುಂದಾಗಿದೆ. ಹಾಸನ ಟಿಕೆಟ್ ತನಗೆ ನೀಡಬೇಕೆಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ , ಪತ್ನಿ ಭವಾನಿ ರೇವಣ್ಣ ಪಟ್ಟು ಹಿಡಿದಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಮಾತ್ರ ತಮ್ಮ ನಿರ್ಧಾರಕ್ಕೆ ಕಟಿಬದ್ಧರಾಗಿದ್ದು, ಕಾರ್ಯಕರ್ತನಿಗೆ ಹಾಸನ ಕ್ಷೇತ್ರದ ಟಿಕೆಟ್ ಎಂಬ ಹೇಳಿಕೆಗೆ ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಿದ್ಧವಾಗುತ್ತಿದೆ. ಈ ಹಿಂದೆಯೇ ಪಕ್ಷದ ಕಾರ್ಯಕರ್ತರಿಗೆ ಅದ್ಯತೆ ಎಂದು ಹೇಳಿದ್ದೆ. ಅದೇ ಮಾತು ಈಗಲೂ ಹೇಳುತ್ತೇನೆ, ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ಎಂದು ಘೋಷಿಸಿದ್ದಾರೆ.
ಹಾಸನ ಕ್ಷೇತ್ರದಲ್ಲಿ ಟಿಕೆಟ್ ಫೈಟ್ ಜೋರಾಗಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.