Sun,Jul26,2026
ಕನ್ನಡ / English

ಟಿಪ್ಪುವನ್ನು ಕೊಂದ ಉರಿಗೌಡ, ನಂಜೇಗೌಡರ ಶಾಶ್ವತ ದ್ವಾರ ನಿರ್ಮಿಸುತ್ತೇವೆ: ಸಿ ಟಿ ರವಿ ಹೇಳಿಕೆ | JANATA NEWS

13 Mar 2023

ವಿಜಯಪುರ : ಉರಿಗೌಡ, ನಂಜೇಗೌಡರ ದ್ವಾರವನ್ನು ಏಕೆ ತೆರವುಗೊಳಿಸಿದ್ದಾರೋ ಗೊತ್ತಿಲ್ಲ. ಆದರೆ, ಅವರಿಬ್ಬರ ಶಾಶ್ವತ ದ್ವಾರ ನಿರ್ಮಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.

ಮಂಡ್ಯದಲ್ಲಿ ಉರಿಗೌಡ ನಂಜೇಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮಹಾದ್ವಾರ ತೆರವು ಮಾಡಿದ್ದು ಅಕ್ಷಮ್ಯ ಅಪರಾಧ. ದೊಡ್ಡ ನಂಜೇಗೌಡ ಹಾಗೂ ಉರಿಗೌಡ ಅವರು ಟಿಪ್ಪುವನ್ನು ಹತ್ಯೆ ಮಾಡಿದರು. ಯಾಕೆ ಹತ್ಯೆ ಮಾಡಿದರು ಎಂಬ ಸತ್ಯ ಹೊರಬರಬೇಕಾಗಿದೆ. ಅವರಿಗೆ ಇತಿಹಾಸದಲ್ಲಿ ಯಾವ ಗೌರವ ಸಿಗಬೇಕಾಗಿತ್ತೋ ಆ ಗೌರವ ಸಿಕ್ಕಿರಲಿಲ್ಲ. ಅವರಿಗೆ ಮತ್ತೆ ಆ ಗೌರವ ಸಿಗಬೇಕು. ಅದಕ್ಕಾಗಿ ಆ ದ್ವಾರ ಹಾಕಿದ್ದು ಸರಿಯಾಗಿದೆ. ಆ ದ್ವಾರವನ್ನು ತೆರವು ಮಾಡಿದ್ದು ತಪ್ಪು. ಜನರ ಮೂಲಕ ಶಾಶ್ವತವಾಗಿ ಆ ದ್ವಾರವನ್ನು ನಿರ್ಮಾಣ ಮಾಡಲು ಬೇಕಾದ ಶಕ್ತಿಯನ್ನು ನಾವು ಮಂಡ್ಯ ಜನರಿಗೆ ನೀಡುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಇಷ್ಟಕ್ಕೂ ನೀವು ಕೊಡುತ್ತಿರುವುದು ಫಾಲ್ಸ್ ಕಾರ್ಡ್ ಎಂಬುವುದು ಜನರಿಗೆ ಗೊತ್ತಿದೆ. ನೀವು ಅಧಿಕಾರದಲ್ಲಿ ಇದ್ದ ಸಂದರ್ಭ ಇದನ್ನು ಅನುಷ್ಠಾನಕ್ಕೆ ತಂದಿದ್ದರೆ ಅದೊಂದು ಮಾದರಿಯಾಗುತ್ತಿತ್ತು. ನೀವು ಈ ಗ್ಯಾರೆಂಟಿ ಕಾರ್ಡ್ ಕೊಟ್ಟಿದ್ದರೆ ಅದು ಸತ್ಯದ ಮಾತಾಗುತ್ತಿತ್ತು. ಈ ಫಾಲ್ಸ್ ಕಾರ್ಡ್‌ಗೆ ಮೂರು ಕಾಸಿನ ಕಿಮ್ಮತ್ತು ಕೂಡಾ ಇಲ್ಲ. ಹಾಗಾಗಿ ಫಾಲ್ಸ್ ಕಾರ್ಡ್ ವಿರುದ್ಧ ನಾವು ರಿಪೋರ್ಟ್ ಕಾರ್ಡ್ ಕೊಡುತ್ತೇವೆ. ಕೆಲಸ ಮಾಡಿರುವುದನ್ನು ಜನರ ಮುಂದೆ ಇಟ್ಟು ಮತ ಕೇಳುತ್ತೇವೆ ಎಂದು ಕಿಡಿಕಾರಿದರು.

RELATED TOPICS:
English summary :Urigowda, Nanjegowda who killed Tipu will build permanent gate: CT Ravi statement

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...