Sat,Oct18,2025
ಕನ್ನಡ / English

ಓಡಾಡುವುದು ಹೆಲಿಕಾಪ್ಟರ್‌ನಲ್ಲಿ, ಆದರೆ ಸ್ವಂತ ಯಾವುದೇ ವಾಹನ ಖರೀದಿಸಿಲ್ಲ! | JANATA NEWS

17 Apr 2023

ಬಳ್ಳಾರಿ : ಇಂದು ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಕೆಆರ್​ಪಿಪಿ ಅಭ್ಯರ್ಥಿಯಾಗಿ ಲಕ್ಷ್ಮೀ ಅರುಣಾ ಅವರು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬೃಹತ್ ಮೆರವಣಿಗೆ ಮಾಡಿ, ನಂತರ ಪಾಲಿಕೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿದ್ದರೂ ಹೆಸರಿಗೆ ಯಾವುದೇ ವಾಹನ ಖರೀದಿಸಿಲ್ಲ. ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗಿಂತ ಪತ್ನಿ ಲಕ್ಷ್ಮೀ ಅರುಣಾ ಸಲ್ಲಿಸಿರುವ ಅಫಿಡೆವಿಟ್‌ನಲ್ಲಿ ಕಂಡು ಬಂದಿರುವ ಮಾಹಿತಿ.

ಮಾಜಿ ಸಚಿವ ಗಣಿ ಧಣಿ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಯಿಂದ ಹೊರ ಬಂದು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ” ವನ್ನು ಸ್ಥಾಪಿಸಿದ್ದಾರೆ. ಜನಾರ್ದನ ರೆಡ್ಡಿ ಈಗಾಗಲೇ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ಪತ್ನಿ ಲಕ್ಮೀ ಅರುಣಾ ಅವರನ್ನು, ಬಿಜೆಪಿ ಅಭ್ಯರ್ಥಿ, ಸಹೋದರ ಸೋಮಶೇಖರ ರೆಡ್ಡಿ ವಿರುದ್ಧ ಕಣಕ್ಕಿಳಿಸಿದ್ದಾರೆ. ಈ ಮೂಲಕ ಬಳ್ಳಾರಿಯಲ್ಲಿ ಅತ್ತೆ ಮತ್ತು ಮೈದುನ ನಡುವೆ ಪೈಪೋಟಿ ಏರ್ಪಟ್ಟಿದೆ.

ಪತಿ ಜನಾರ್ದನ ರೆಡ್ಡಿಗಿಂತ ಅವರ ಪತ್ನಿಯೇ ಶ್ರೀಮಂತೆಯಾಗಿದ್ದಾರೆ. ಲಕ್ಷ್ಮೀ ಅರುಣಾ ಅವರು 1.76 ಲಕ್ಷ ರೂ. ನಗದು ಹೊಂದಿದ್ದರೆ, ಅವರ ಪತಿ 1.33 ಲಕ್ಷ ರೂ. ಹೊಂದಿದ್ದಾರೆ.

ಲಕ್ಷ್ಮೀ ಅರುಣಾ ಅವರ ಚರಾಸ್ತಿ ಮೌಲ್ಯ 96.23 ಕೋಟಿ ರೂ. ಇದ್ದರೆ, ಜನಾರ್ದನ ರೆಡ್ಡಿ 29.20 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು ಮಗ ಕಿರೀಟಿ ರೆಡ್ಡಿ 7.24 ಕೋಟಿ ರೂ. ಚರಾಸ್ತಿ ಹೊಂದಿದ್ದಾರೆ. ಇನ್ನು ಲಕ್ಷ್ಮೀ ಅರುಣಾ 104.38 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತಿ ಜನಾರ್ದನ ರೆಡ್ಡಿ ಹೆಸರಿನಲ್ಲಿ 8 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಕಿರೀಟಿ ರೆಡ್ಡಿ 1.24 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ ಎಂದು ಅಫಿಡವಿಟ್‌ನಲ್ಲಿರುವ ಮಾಹಿತಿ ಲಭ್ಯವಾಗಿದೆ.

RELATED TOPICS:
English summary :Flying in a helicopter, but never bought a car!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...