Sun,Dec07,2025
ಕನ್ನಡ / English

ನಾಮಪತ್ರ ಹಿಂಪಡೆದು ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಶಾಸಕಿ ಶಾರದಾ ಶೆಟ್ಟಿ | JANATA NEWS

24 Apr 2023

ಕಾರವಾರ : ಕಾಂಗ್ರೆಸ್​ನಿಂದ ಬಂಡಾಯ ಎದ್ದು ಪಕ್ಷೇತರವಾಗಿ ಸ್ಪರ್ಧಿಸಿದ್ದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ತಮ್ಮ ನಾಮಪತ್ರವನ್ನು ಹಿಂಪಡೆಯುವುದರ ಜೊತೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಕುಮಟಾ-ಹೊನ್ನಾವರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್‌ಯನ್ನು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿವೇದಿತ್ ಆಳ್ವಾ ಅವರಿಗೆ ಹೈಕಮಾಂಡ್ ನೀಡಿತ್ತು. ಕುಮಟಾ ಕ್ಷೇತ್ರದಿಂದ ಟಿಕೆಟ್‌ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸದ ನಿವೇದಿತ್ ಆಳ್ವಾ ಅವರಿಗೆ ಟಿಕೆಟ್ ನೀಡುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು.

ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರು ಬಂಡಾಯವಾಗಿ ಸ್ಪರ್ಧಿಸಲು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.

ಇದು ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ಅವರಿಗೆ ತಲೆನೋವಾಗಿ ಪರಿಣಮಿಸಿತ್ತು. ಶಾರದಾ ಶೆಟ್ಟಿ ಅವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿ ಕರೆ ಮಾಡಿ ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆ ಮಾಡಿದ್ದಾರೆ. ಎಂ.ಎಲ್.ಸಿ. ಅಥವಾ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ಕೊಡುವುದಾಗಿಯೂ ಭರವಸೆ ಕೊಟ್ಟಿದ್ದರು ಎನ್ನಲಾಗಿತ್ತು.

ಆದರೆ ಶಾರದಾ ಶೆಟ್ಟಿನಾಮಪತ್ರ ಹಿಂಪಡೆಯುವುದರ ಜೊತೆಗೆ, ಇಂದು ನಾನು ರಾಜಕೀಯವಾಗಿಯೇ ನಿವೃತ್ತಿ ಪಡೆಯಲು ಬಯಸಿದ್ದೇನೆ ಎಂದು ತಿಳಿಸಿದ್ದಾರೆ.

ಪಕ್ಷಕ್ಕಾಗಿ ಹಲವು ವರ್ಷದಿಂದ ನಾನು ಮತ್ತು ನಮ್ಮ ಕುಟುಂಬದವರು ಕೆಲಸ ಮಾಡಿದ್ದೇವೆ. ಆದರೆ, ಪಕ್ಷ ಟಿಕೆಟ್ ನೀಡದಿರುವುದು ನೋವುಂಟು ಮಾಡಿದೆ. ಅಲ್ಲದೇ ರಾಜಕೀಯ ನಿವೃತ್ತಿ ಪಡೆದ ಮೇಲೆ ಯಾರೊಬ್ಬರಿಗೂ ಬೆಂಬಲಿಸುವ ಪ್ರಮೇಯವೇ ಇಲ್ಲ. ನನ್ನ ಬೆಂಬಲಿಗರು ಯಾರನ್ನಾದರೂ ಬೆಂಬಲಿಸಲು ಸ್ವತಂತ್ರರಾಗಿದ್ದಾರೆ ಎಂದು ತಿಳಿಸಿದ್ದಾರೆ.

RELATED TOPICS:
English summary :Former MLA Sharada Shetty has withdrawn her nomination and announced her political retirement

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಅಯೋಧ್ಯೆಯ  ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ಅದ್ದೂರಿಯಾಗಿ ಧರ್ಮ ಧ್ವಜಾರೋಹಣ ಸಮಾರಂಭ - ವಿಶೇಷತೆ

ನ್ಯೂಸ್ MORE NEWS...