Sat,Oct18,2025
ಕನ್ನಡ / English

ಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್​ ಆರೋಪದ ಬಗ್ಗೆ ತನಿಖೆ ನಡೆಸಿ: ಕಾಂಗ್ರೆಸ್​ಗೆ ಕುಮಾರಸ್ವಾಮಿ ಸವಾಲು | JANATA NEWS

12 Jun 2023

ರಾಮನಗರ : ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ ಬಗ್ಗೆ ಕಾಂಗ್ರೆಸ್​ ನಾಯಕರು ಸಾಬೀತು ಮಾಡಿದ್ದಾರಾ? ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದ್ರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ ಎಂದರು.

ಲೋಕಸಭಾ ಚುನಾವಣಾ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನು ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂಸದ ಡಿ.ಕೆ. ಸುರೇಶ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ ಅವರು, “ನನ್ನ ವಿಚಾರ ಬಿಡಿ, ರಾಮನಗರದ ಹಾಲಿ ಸಂಸದರ ವಿಚಾರವನ್ನೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂಥವರೇ ಚುನಾವಣೆ ಬೇಡ ಎಂದು ಹೇಳುತ್ತಿರುವಾಗ ನಮ್ಮದು ಯಾವ ಲೆಕ್ಕ ಎಂದು ಡಿ.ಕೆ. ಸುರೇಶ್ ಹೆಸರೇಳದೆ ವ್ಯಂಗ್ಯವಾಡಿದರು.

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ದರೇ? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತೇವೆ ಅಂತಿದ್ದಾರೆ. ಆದರೆ ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಮೊದಲು ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ದರು. ಆಮೇಲೆ ಕೊಡ್ತೇವಿ ಅಂದರು. ಈಗ ಮಾಲೀಕರು ಬಾಡಿಗೆದಾರರು ಅಗ್ರಿಮೆಂಟ್ ಕೊಡ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗ್ತಿವೆ. ಘೋಷಣೆ ಮಾಡ್ದಾಗ ನನಗೂ ಫ್ರೀ, ನಿನಗೂ ಫ್ರೀ ಅಂದ್ರಿ.! ಈಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ನೋಡಬೇಕು ಎಂದು ಹೇಳಿದರು.

RELATED TOPICS:
English summary :Investigate 40 percent allegation on BJP govt: Kumaraswamy challenges Congress

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...