Sat,Oct18,2025
ಕನ್ನಡ / English

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್ಸಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದ ವಿವಾಹಿತೆ! | JANATA NEWS

14 Jun 2023

ಮಂಗಳೂರು : ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದ್ದು, ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ.

ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ‌ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಹುಬ್ಬಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ.

ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ.

ಯುವಕನೋರ್ವನನ್ನು ಪ್ರೀತಿಸುತ್ತಿರುವುದು ತಿಳಿದಿದ್ದ ಮನೆಯವರು ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ.

ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ. ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

RELATED TOPICS:
English summary :A married woman left her 11-month-old baby for her lover and came to Mangalore from Hubli in a free bus!

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...