ಹಿಂದಿನ ಸರ್ಕಾರಗಳ ಎಲ್ಲಾ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ: ಸಿದ್ದರಾಮಯ್ಯ | JANATA NEWS
![](2023/June/Jimg/1687868875.png)
ಹಾಸನ : ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಅವ್ಯವಹಾರಗಳನ್ನು ತನಿಖೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನದ ಬೂವನಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಲ್ಕು ಮೆಡಿಕಲ್ ಕಾಲೇಜು, 40% ಕಮಿಷನ್ ವಿಚಾರದಲ್ಲಿ ತನಿಖೆ ಮಾಡುತ್ತೇವೆ. ಕೊರೊನಾ ಸಂದರ್ಭದ ಯೋಜನೆ, ನೀರಾವರಿ, ಬಿಟ್ ಕಾಯಿನ್, ಪಿಎಸ್‌ಐ, ಚಾಮರಾಜನಗರ ದುರಂತದ ಬಗ್ಗೆಯೂ ತನಿಖೆ ಮಾಡುತ್ತೇವೆ ಎಂದರು.
ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು.
ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದು ಹೇಳಿದರು.