Sun,Jul26,2026
ಕನ್ನಡ / English

ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯಾಗಿ ಜಿಲ್ಲಾ ನ್ಯಾಯಾಧೀಶರ ನೇಮಕ | JANATA NEWS

03 Jul 2023

ಚಿತ್ರದುರ್ಗ : ಮುರುಘಾಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ಪ್ರಧಾನಾ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರನ್ನು ನೇಮಕ ಮಾಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಮೇಲ್ಮನವಿಯ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಎಂ ಜಿ ಎಸ್ ಕಮಲ್ ಅವರನ್ನೊಳಗೊಂಡ ನ್ಯಾಯಪೀಠವು ಇಂದು ನಡೆಸಿತು.

ಮೇಲ್ಮನವಿಯ ಅರ್ಜಿಯನ್ನು ಜುಲೈ.18ರಂದು ವಿಚಾರಣೆ ನಡೆಸಲು ನಿಗಧಿ ಪಡಿಸಿರುವಂತ ಹೈಕೋರ್ಟ್ ನ್ಯಾಯಪೀಠವು ಅಲ್ಲಿಯವರೆಗೆ ಮುರುಘಾಮಠಕ್ಕೆ ತಾತ್ಕಾಲಿಕವಾಗಿ ಆಡಳಿತಾಧಿಕಾರಿಯನ್ನಾಗಿ ಚಿತ್ರದುರ್ಗ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ನೇಮಕ ಮಾಡಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಅಧಿಕಾರ ವಹಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶರನ್ನು ಜಗದ್ಗುರು ಮುರುಘರಾಜೇಂದ್ರ ಮಠ, ವಿದ್ಯಾಪೀಠದ ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ಮಠ, ವಿದ್ಯಾಪೀಠದ ದಿನನಿತ್ಯದ ವ್ಯವಹಾರ ನೋಡಿಕೊಳ್ಳಬೇಕು.

ಯಾವುದೇ ನೀತಿ ನಿರ್ಧಾರದ‌ ಕ್ರಮಗಳನ್ನು ಕೈಗೊಳ್ಳುವಂತಿಲ್ಲ. ಚಿತ್ರದುರ್ಗ ಜಿಲ್ಲಾಧಿಕಾರಿಯವರು ಜಿಲ್ಲಾ ನ್ಯಾಯಾಧೀಶರಿಗೆ ಸಹಕಾರ ನೀಡಬೇಕು. ಜಿಲ್ಲಾ ನ್ಯಾಯಾಧೀಶರು ಕೋರಿದ‌ ಸಹಕಾರ ನೀಡಬೇಕು ಎಂದು ವಿಭಾಗೀಯ ಪೀಠ ಸೂಚಿಸಿದೆ.

RELATED TOPICS:
English summary :Appointment of District Judge as Temporary Administrator for Muruga Math ​

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ

ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ

ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ

ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ

ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು

ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ

ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್

ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...