Sun,Jul26,2026
ಕನ್ನಡ / English

ನಾಪತ್ತೆಯಾಗಿದ್ದ ನಂದಿಪರ್ವತ ಆಶ್ರಮದ ಜೈನಮುನಿ ಬರ್ಬರ ಹತ್ಯೆ, ಜೈನ ಮುನಿ ಶವ ಪತ್ತೆ | JANATA NEWS

08 Jul 2023

ಬೆಳಗಾವಿ : ಬಸದಿಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಜೈನಮುನಿ ಬರ್ಬರ ಹತ್ಯೆಯಾಗಿರುವ ಘಟನೆ ಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.

ಹಿರೇಕೋಡಿ ಗ್ರಾಮದ ನಂದಿಪರ್ವತ ಜೈನ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರು ಹತ್ಯೆಯಾದವರು.

ಚಿಕ್ಕೋಡಿ ತಾಲೂಕು ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದಿಂದ ನಾಪತ್ತೆಯಾಗಿದ್ದ ಮುನಿ ಆಚಾರ್ಯ ಶ್ರೀ 108 ಕಾಮ ಕುಮಾರ ನಂದಿ ಮಹಾರಾಜರ ಮೃತ ದೇಹ ಶುಕ್ರವಾರ ರಾತ್ರಿ ಹೀರೆಕೋಡಿಯ ಹೊರವಲಯದಲ್ಲಿ ಪತ್ತೆಯಾಗಿದೆ.

ಜೈನ ಮುನಿ ಕಳೆದ 15 ವರ್ಷಗಳಿಂದ ನಂದಿಪರ್ವತ ಆಶ್ರಮದಲ್ಲಿ ವಾಸವಿದ್ದರು.

ಜುಲೈ 6ರಂದು ಬೆಳಗ್ಗೆ ತಮ್ಮ ಆಶ್ರಮದಿಂದ ನಾಪತ್ತೆಯಾಗಿದ್ದರು. ಅವರ ಸಹಾಯಕಿ, ಸ್ವಾಮೀಜಿಯವರ ಕೊಠಡಿಗೆ ಸ್ವಾಮೀಜಿಯವರನ್ನು ಮಾತನಾಡಿಸಲು ಹೋಗಿದ್ದಾಗ ಅವರು ಅಲ್ಲಿರಲಿಲ್ಲ. ಇಡೀ ಆಶ್ರಮ ಹುಡುಕಿದರೂ ಸ್ವಾಮೀಜಿ ಸಿಕ್ಕಿರಲಿಲ್ಲ. ಆದರೆ, ಮಧ್ಯಾಹ್ನವಾದರೂ ಸ್ವಾಮೀಜಿ ಪತ್ತೆಯಾಗದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕೋಡಿ ಪೊಲೀಸ್ ಠಾಣೆಗೆ ಜೈನಮುನಿಗಳು ನಾಪತ್ತೆಯಾಗಿರುವ ಬಗ್ಗೆ ಭಕ್ತರು ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು‌ ತನಿಖೆ ಕೈಗೊಂಡಿದ್ದ ಚಿಕ್ಕೋಡಿ ಪೊಲೀಸರು, ಅನುಮಾನದ ಮೇಲೆ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದಾಗ ಹತ್ಯೆಯ ಭಯಾನಕ ವಿಚಾರ ಹೊರಬಿದ್ದಿದೆ. ವಿಚಾರಣೆಗೊಳಪಟ್ಟವರಲ್ಲಿ ಒಬ್ಬನು ಸ್ವಾಮೀಜಿಯವರ ಹತ್ಯೆಯಾಗಿರುವುದನ್ನು ಬಾಯಿಬಿಟ್ಟಿದ್ದಾನೆ ಎಂದು ಹೇಳಲಾಗಿದೆ.

ಹಂತಕರು ಸ್ವಾಮೀಜಿಯಿಂದ ದೊಡ್ಡ ಮೊತ್ತದ ಹಣವನ್ನು ಸಾಲವಾಗಿ ಪಡೆದಿದ್ದು, ಆದರೆ, ವರ್ಷಗಳಾದರೂ ಸಾಲವನ್ನು ತೀರಿಸಿರಲಿಲ್ಲ, ಹಾಗಾಗಿ, ಸ್ವಾಮೀಜಿಯವರು ಹಣ ವಾಪಸ್ ಕೊಡುವಂತೆ ಪದೇ ಪದೇ ಕೇಳಲಾರಂಭಿಸಿದ್ದಕ್ಕೆ ಹಂತಕರು ಸ್ವಾಮೀಜಿಯವರನ್ನು ಹತ್ಯೆ ಮಾಡಿರುವುದಾಗಿ ಸಿಕ್ಕಿಬಿದ್ದಿರುವ ಹಂತಕರು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ

RELATED TOPICS:
English summary :Jain Muni of Nandiparvat Ashram, who was missing, killed by barbarians, body of Jain Muni found

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...