Sat,Oct18,2025
ಕನ್ನಡ / English

ಕಳೆನಾಶಕ ಸಿಂಪಡಿಸುವಾಗ ದೇಹದೊಳಗೆ ಸೇರಿ ಉಪವಲಯ ಅರಣ್ಯಾಧಿಕಾರಿ ಅನುಮಾನಾಸ್ಪದವಾಗಿ ಸಾವು

08 Jul 2023

ಕುಮಟಾ : ಗಿಡಗಳಿಗೆ ಕಳೆನಾಶಕ ಸಿಂಪಡಿಸಿದ ನಂತರ ದೇಹದೊಳಗೆ ಅಪಾಯಕಾರಿ ವಿಷ ಸೇರಿದ ಪರಿಣಾಮವಾಗಿ ಕರ್ತವ್ಯ ನಿರತ ಅರಣ್ಯಾಧಿಕಾರಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ವಿಚಿತ್ರ ಘಟನೆ ವರದಿಯಾಗಿದೆ.

ದಾಂಡೇಲಿ ತಾಲ್ಲೂಕಿನ ಕುಳಗಿ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಮೃತ ದುರ್ದೈವಿ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಕಳೆನಾಶಕ ಸಿಂಪಡಿಸುವ ವಿಧಾನದ ಬಗ್ಗೆ ಸಾಕಷ್ಟು ಅನುಭವ ಹೊಂದಿದ್ದ ಅಧಿಕಾರಿಯೊಬ್ಬರ ಸಾವು ಹಲವಾರು ಸಂಶಯಕ್ಕೆ ಕಾರಣವಾಗಿದೆ, ಎನ್ನಲಾಗಿದೆ.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಬಾಡ ಗ್ರಾಮದವರಾದ ಯೋಗೇಶ್ ನಾಯ್ಕ ಅವರು ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಜೂನ್ 27 ರಂದು ಸಾಗವಾನಿ ಸಸಿಗಳ ಕಳೆಯನ್ನು ನಾಶಪಡಿಸಲು ಹಾಗೂ ಭೂಮಿ ಒಳಗಡೆ ಇರುವ ಹುಳಹುಪ್ಪಡಿಗಳನ್ನು ಸಾಯಿಸಲು ವಿಷಪೂರಿತ ಕೀಟ ನಾಶಕವನ್ನು ಸಹೋದ್ಯೋಗಿಗಳ ಜೊತೆ ಯೋಗೇಶ ಸಹ ಸಿಂಪಡಿಸಿದ್ದರು, ಎನ್ನಲಾಗಿದೆ.

ಕೀಟನಾಶಕ ಸಿಂಪಡಿಸಿದ ನಂತರ ಯೋಗೇಶ್ ನಾಯ್ಕ ಅವರು ಕೈ ತೊಳೆಯದೆ ಊಟ, ನೀರು ಸೇವಿಸಿದ್ದಾರೆ, ಎನ್ನಲಾಗಿದೆ. ಮರುದಿನ ಯೋಗೇಶ್ ನಾಯ್ಕ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಅನಾರೋಗ್ಯ ಉಲ್ಬಣಗೊಳ್ಳುತ್ತಿದ್ದಂತೆಯೆ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಯೋಗೇಶ್ ನಾಯ್ಕ ಅವರನ್ನು ದಾಖಲಿಸಲಾಗಿದೆ.

ಚಿಕಿತ್ಸೆ ನಡೆಸಿದಾಗ ಆಗಲೇ ಕಿಡ್ನಿ, ಲಿವರ್, ಲಂಗ್ಸ್​​ಗಳು ಡ್ಯಾಮೇಜ್ ಆಗಿದ್ದವು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆಗೆ ಯೋಗೇಶ್ ನಾಯ್ಕ್ ಕೋಮಾ ಸ್ಥಿತಿಗೆ ತಲುಪಿದ್ದರು. ಅಲ್ಲೂ ಕೂಡ ಚಿಕಿತ್ಸೆಗೆ ಸ್ಪಂಧಿಸದ ಕಾರಣ ಹುಬ್ಬಳ್ಳಿಯ ಕಿಮ್ಸ್​​ಗೆ ಶಿಪ್ಟ್ ಆಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹೆಂಡತಿ ಹಾಗು ಎರಡುವರೆ ವರ್ಷದ ಪುಟ್ಟ ಮಗ ನನ್ನ ಅಗಲಿದ್ದಾರೆ. ಯೋಗೇಶ್ ನಾಯ್ಕ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ನಿನ್ನೆ ಸಂಜೆಯೆ ಮೃತಪಟ್ಟಿದ್ದ ಯೋಗೇಶ್ ನಾಯ್ಕ ಅವರ ಮೃತದೇಹವನ್ನು ಇಂದು ಶನಿವಾರ ಹುಬ್ಬಳ್ಳಿಯಿಂದ ಬೆಳಿಗ್ಗೆ 7 ಗಂಟೆಗೆ ಹಳಿಯಾಳದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಾರ್ಯಾಲಯದ ಆವರಣಕ್ಕೆ ತರಲಾಯಿತು.

ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಶಾಖೆಯ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ ಅವರಿಗೆ ಹಳಿಯಾಳ ಪಟ್ಟಣದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

RELATED TOPICS:
English summary :Sub-Divisional forest officer suspiciously died after getting inside his body while spraying herbicide

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...