Sun,Jul26,2026
ಕನ್ನಡ / English

ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ, ಇಲಿ ಪಾಷಾಣ ತಿಂದು ಆತ್ಮಹತ್ಯೆ ಮಾಡಿಕೊಂಡ ಯುವತಿ | JANATA NEWS

23 Jul 2023

ಮೈಸೂರು : ಪ್ರಿಯಕರ ಮತ್ತೊಬ್ಬಳ ಜೊತೆ ಸುತ್ತಾಡಿದ ಹಿನ್ನೆಲೆಯಲ್ಲಿ ಯುವತಿ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಿಸರ್ಗ(20) ಮೃತ ಯುವತಿ. ಪ್ರಿಯಕರನಿಂದ ಮೋಸ ಹೋಗಿ, ಅದೇ ದುಃಖದಲ್ಲಿ ಜು.9ರಂದು ಇಲಿ ಪಾಷಾಣ ಸೇವಿಸಿ ನಿಸರ್ಗ, ಪಾಲಕರಿಗೂ ತಿಳಿಸದೇ ಒಂದು ವಾರ ನೋವಿನಿಂದಲೇ ನರಳಿ ಕೊನೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ನಿಸರ್ಗ ಅಂತಿಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಈಕೆ ಅದೇ ಕಾಲೇಜಿನಲ್ಲಿ ಓದುತ್ತಿರುವ ಸುಹಾಸ್ ರೆಡ್ಡಿ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನಾಲ್ಕು ವರ್ಷಗಳ ಕಾಲ ಈ ಜೋಡಿ ಊರೂರು ಸುತ್ತಾಡಿದೆ. ನಂತರ ಸುಹಾಸ್ ಗೆ ಅನನ್ಯಾ ಎಂಬ ಮತ್ತೊಬ್ಬಳ ಜೊತೆ ಲವ್ ಆಗಿದೆ. ಈ ವಿಚಾರ ತಿಳಿದಾಗಿನಿಂದ ನಿಸರ್ಗ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು.

ಸುಹಾಸ್ ಅನನ್ಯ ಎಂಬ ಮತ್ತೊಂದು ಹುಡುಗಿಯನ್ನು ಪ್ರೀತಿಸಿ ನನಗೆ ಮೋಸ ಮಾಡಿದ. ಅಲ್ಲದೆ, ನನ್ನ ಮುಂದೆಯೇ ಸುತ್ತಾಡಿ ನನಗೆ ಮಾನಸಿಕವಾಗಿ ಹಿಂಸೆ ನೀಡಿ ನೀನು ಇನ್ನೂ ಏಕೆ ಬದುಕಿದಿಯಾ ಸಾಯಿ ಎಂದು ಪದೇ ಪದೇ ಹೇಳುತ್ತಿದ್ದರು.

ಅವರಿಬ್ಬರ ವರ್ತನೆಯಿಂದ ಮನನೊಂದು ಪ್ರೀತಿಯ ವಿಚಾರವನ್ನು ಅನನ್ಯಳ ತಂದೆ ಗೋಪಾಲಕೃಷ್ಣ ಅವರಿಗೂ ತಿಳಿಸಿದೆ. ಆದರೆ, ಅವರು ನನಗೆ ಬಾಯಿಗೆ ಬಂದಂತೆ ನಿಂದಿಸಿ, ಸಾಯಿ ಎಂದರು.

ಬಳಿಕ ಸುಹಾಸ್‌ ರೆಡ್ಡಿ ತಂದೆ ಬಾಬುರೆಡ್ಡಿ, ತಾಯಿ ರೂಪ ಅವರಿಗೂ ನಮ್ಮ ಪ್ರೀತಿಯ ವಿಚಾರವನ್ನು ತಿಳಿಸಿದೆ. ಅವರು ಸಹ ನನಗೆ ಬಾಯಿಗೆ ಬಂದಂತೆ ಬೈಯ್ದು ಅವಮಾನ ಮಾಡಿದರು.

ಯಾರೂ ಕೂಡ ಸಹ ನನ್ನ ಸಹಾಯಕ್ಕೆ ಬರಲಿಲ್ಲ, ಎಲ್ಲರೂ ನನ್ನನ್ನು ನಿಂದಿಸಿ ಪದೇಪದೆ ಸಾಯಿ ಎಂದು ಪ್ರೇರಣೆ ನೀಡಿದ್ದರಿಂದ ನಾನು ಮನೆಯಲ್ಲಿದ್ದ ಇಲಿಪಾಷಾಣವನ್ನು ಸೇವಿಸಿದೆ ಮತ್ತು ಭಯದಿಂದ ಮನೆಯಲ್ಲಿ ಈ ವಿಚಾರವನ್ನು ಯಾರಿಗೂ ತಿಳಸಲಿಲ್ಲ ಎಂದು ಸಾಯುವ ಮುನ್ನ ನಿಸರ್ಗ ಹೇಳಿದ್ದಾಳೆ ಎನ್ನಲಾಗಿದೆ. ಡೆತ್‍ನೋಟ್ ಬರೆದಿಟ್ಟು ಬ್ಯಾಗ್‍ನಲಿಟ್ಟುಕೊಂಡು ನಿಸರ್ಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

RELATED TOPICS:
English summary :A young woman who hanged out with another lover, committed suicide by eating rat stone

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...