Sat,Oct18,2025
ಕನ್ನಡ / English

ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಕೇಸ್‌ಗೆ ಟ್ವಿಸ್ಟ್, ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು | JANATA NEWS

25 Jul 2023

ಮಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ಯುವತಿಯರ ಅರೆನಗ್ನ ವೀಡಿಯೋ ಸೆರೆ ಹಿಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ನಂತರ ಕಾಲೇಜು ಆಡಳಿತ ಮಂಡಳಿಯು ಸ್ಪಷ್ಟೀಕರಣವನ್ನು ನೀಡಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಲೇಜು ನಿರ್ದೇಶಕಿ, ಮೂರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ‌ ಎಂದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೊಬೈಲ್ ಫೋನ್ ಗಳನ್ನು ಪೊಲೀಸ್ ತನಿಖೆಗೆ ನೀಡಲಾಗಿದೆ. ಕಾಲೇಜಿನಲ್ಲಿರುವ ಎಲ್ಲ ವಿದ್ಯಾರ್ಥಿಗಳು ನಮ್ಮವರೇ ಆಗಿದ್ದಾರೆ. ಇದರಲ್ಲಿ ಜಾತಿ, ಧರ್ಮದ ಪ್ರಶ್ನೆಯೇ ಇಲ್ಲ ಎಂದರು.

ಕಾಲೇಜಿಗೆ ಮೊಬೈಲ್ ತರಲು ಅವಕಾಶ ಇಲ್ಲ. ಈ ಕಾರಣಕ್ಕೆ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿದೆ. ಅಮಾನತುಗೊಂಡ ವಿದ್ಯಾರ್ಥಿಗಳನ್ನು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಮಕ್ಕಳು ತಪ್ಪೊಪ್ಪಿಗೆ ಕೊಟ್ಟ ನಂತರವೂ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಕಾಲೇಜ್ ಗೆ ಮೊಬೈಲ್ ತರುವಂತಿಲ್ಲ, ಕಾನೂನು ಮೀರಿದ ಕಾರಣ ಮೊಬೈಲನ್ನು ಪೊಲೀಸರಿಗೆ ಒಪ್ಪಿಸಿದ್ದೇವೆ. ತಮಾಷೆಯ ವೀಡಿಯೋ ಮಾಡಿರುವುದಾಗಿ ಮೂವರು ಹೇಳಿದ್ದಾರೆ. ಮೊಬೈಲ್ ಕೊಡುವಾಗಲೇ ಅದರಲ್ಲಿ ವೀಡಿಯೋ ಇರಲಿಲ್ಲ. ವಾಶ್ ರೂಮ್ ಗೆ ಹೋದಾಗ ಮೊಬೈಲ್ ನೋಡಿದೆ, ತಕ್ಷಣ ಹೊರಗೆ ಬಂದೆ. ಸ್ಥಳದಲ್ಲೇ ವಿಡಿಯೋ ಡಿಲೀಟ್ ಮಾಡಿಸಿರುವುದಾಗಿ ಯುವತಿ ಹೇಳಿದ್ದಾಳೆ ಎಂದರು.

ನೂರಾರು ವಿದ್ಯಾರ್ಥಿನೀಯರ ಚಿತ್ರೀಕರಣ ಮಾಡಲಾಗಿದೆ ಎನ್ನುವುದು ಸರಿಯಲ್ಲ. ವಿಚಾರ ತಿಳಿಯದೆ ತಪ್ಪು ಮಾಹಿತಿ ಯಾರೂ ಹಾಕಬೇಡಿ. ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ ಇದು ನನ್ನ ಮನವಿ.

ಇನ್ನು ಯಾರೊಬ್ಬರೂ ಸುಳ್ಳು ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡಬೇಡಿ. ಕಾಲೇಜಿನ ಮಕ್ಕಳಲ್ಲಿ ನಾವು ಧರ್ಮವನ್ನು ನೋಡಲ್ಲ. ಚಿತ್ರೀಕರಿಸಿದ ಧರ್ಮದವರೇ ಕಾಲೇಜಿನಲ್ಲಿ ಘಟನೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ತಮಾಷೆಗೆ ಮಾಡಿರುವುದರಿಂದ ನನ್ನ ಭವಿಷ್ಯ, ಆ ಮೂವರ ಭವಿಷ್ಯ ಮುಖ್ಯ ಅಂತ ಸಂತ್ರಸ್ಥೆ ಬರೆದು ನೀಡಿದ್ದಾಳೆ ಎಂದು ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮೀ ಕೃಷ್ಣಪ್ರಸಾದ್ ಮಾಹಿತಿಯನ್ನು ನೀಡಿದ್ದಾರೆ.

ಘಟನೆ -

ಉಡುಪಿಯ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಮೂವರು ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ಅರೆ ನಗ್ನ ಚಿತ್ರಗಳನ್ನು ರೆಕಾರ್ಡ್‌ ಮಾಡಿದ್ದಾರೆ. ನಂತರ, ಅವುಗಳನ್ನು ಅವರದ್ದೇ ಸಮುದಾಯದ ಯವಕರಿಗೆ ಕಳುಹಿಸಲಾಗುತ್ತದೆ. ನಂತರ, ಆ ವೀಡಿಯೋಗಳನ್ನು ಕೆಲವೊಂದು ವಾಟ್ಸಾಪ್‌ ಗುಂಪುಗಳಿಗೆ ಹಂಚಿಕೊಳ್ಳಲಾಗತ್ತಿತ್ತು. ಈ ಬಗ್ಗೆ ಹಿಂದೂ ವಿದ್ಯಾರ್ಥಿನಿಯರಿಗೆ ಮಾಹಿತಿ ತಿಳಿದು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಇದನ್ನು ಪರಿಶೀಲನೆ ಮಾಡಿದ ಕಾಲೇಜು ಆಡಳಿತ ಮಂಡಳಿಯವರು, ಕ್ಯಾಮರಾ ಇಟ್ಟಿದ್ದ ವಿದ್ಯಾರ್ಥಿನಿಯರ ಮೊಬೈಲ್‌ನಲ್ಲಿದ್ದ ವೀಡಿಯೋಗಳನ್ನು ಡಿಲೀಟ್‌ ಮಾಡಿಸಿದ್ದಾರೆ.

RELATED TOPICS:
English summary :Twist in the case of filming in the college toilet, the college has been suspended

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...