Sun,Jul26,2026
ಕನ್ನಡ / English

ಕುಟುಂಬದ ಸಜೀವ ದಹನ: ಚಿತೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಶಂಕೆ! | JANATA NEWS

08 Oct 2023

ಶಿವಮೊಗ್ಗ : ಜಿಲ್ಲೆಯ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯಲ್ಲಿ ಒಂದೇ ಕುಟುಂಬದ ಮೂವರು ಬೆಂಕಿ ತಗುಲಿ ಸಾವನ್ನಪ್ಪಿದ್ದಾರೆ.

ಕುಟುಂಬದ ಹಿರಿಯರಾದ ಅರ್ಚಕ ಕೆಲಸ ಮಾಡುತ್ತಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (30) ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದಾರೆ , ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ ಭೇಟಿ ಮಾಡಿದ್ದಾರೆ. ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಮಾಡಿದ್ದು, ಎಸಿ ಸತ್ಯನಾರಾಯಣ, ತಾಸಿಲ್ದಾರ್ ಮೆಸ್ಕಾಂ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.

ಆರಗ ಜ್ಞಾನೇಂದ್ರ ಮಾತನಾಡಿ, ಘಟನೆಯಿಂದ ತೀವ್ರ ನೋವಾಗಿದೆ. ಮೃತ ರಾಘವೇಂದ್ರ ಕೆಕೋಡ್ ಕುಟುಂಬಕ್ಕೆ 10 ಎಕರೆ ಅಡಿಕೆ ತೋಟವಿದೆ. 20 ರಿಂದ 25 ವರ್ಷದಿಂದ ಈ ಕುಟುಂಬ ನನಗೆ ಪರಿಚಯ ಇದೆ. ಆರ್ಥಿಕವಾಗಿ ಕುಟುಂಬಸ್ಥರು ಚೆನ್ನಾಗಿ ಇದ್ದಾರೆ ಬಡತನ ಏನು ಇಲ್ಲ. ರಾಘವೇಂದ್ರ ಅವರ ಅಣ್ಣ ತಮ್ಮಂದಿರು ಎಲ್ಲರೂ ಹೊರಗೆ ಇದ್ದಾರೆ.. ಎಲ್ಲರೂ ಚೆನ್ನಾಗಿ ಇದ್ದಾರೆ. ರಾಘವೇಂದ್ರ ಕುಟುಂಬ ಮಾತ್ರ ಗ್ರಾಮದಲ್ಲಿ ವಾಸವಾಗಿದೆ. ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಓರ್ವ ಮಗನ ಸ್ಥಿತಿ ಗಂಭೀರವಾಗಿದೆ. ಸದ್ಯ ಘಟನೆಗೆ ಕಾರಣ ಏನು ಎನ್ನುವುದು ಗೊತ್ತಾಗುತ್ತಿಲ್ಲ. ಪೊಲೀಸ್ ತನಿಖೆಯಿಂದಷ್ಟೇ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎಂದಿದ್ದಾರೆ. ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್ ತಂಡ ಬಂದಿ ಪರಿಶೀಲನೆ ಮಾಡುತ್ತಿದೆ ಎಂದಿದ್ದಾರೆ ಎನ್ನಲಾಗಿದೆ.

ಸ್ಥಳ ಪರಿಶೀಲನೆ ನಡೆಸಿದ ಎಸ್​ಪಿ ಮಿಥುನ್ ಕುಮಾರ್, ಮನೆಯ ಕೋಣೆಯಲ್ಲಿ ಮೂವರ ಮೃತ ದೇಹ ಪತ್ತೆಯಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಘಟನೆ ನಡೆದ ಅರ್ಧಗಂಟೆಯೊಳಗೆ ತೀರ್ಥಹಳ್ಳಿಯಿಂದ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಭರತಗೆ ಶೇಕಡ 40 ರಿಂದ 50ರಷ್ಟು ಸುಟ್ಟ ಗಾಯಗಳಾಗಿದೆ. ಅವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ದಾವಣಗೆರೆಯಿಂದ ಪೋರೆನ್ಸಿಕ್ ತಜ್ಞರ ತಂಡ, ಸೀನ್ ಆಫ್ ಕ್ರೈಮ್ ಆಫೀಸರ್ಸ್ ತಂಡ ಹಾಗೂ ಡಾಗ್ ಸ್ಕ್ವಾಡ್ ಆಗಮಿಸಿದೆ ಪರಿಶೀಲನೆ ಮಾಡುತ್ತಿದ್ದಾರೆ ಎಂದಿದ್ದಾರೆ.

RELATED TOPICS:
English summary :Burning the family alive: Suspect committed suicide by jumping on the pyre!

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ರಾಷ್ಟ್ರೀಯ ಐಕ್ಯತೆಯ ಕಾರಣ ನೀಡಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಸಿಜೆಪಿ ಪ್ರತಿಭಟನೆಯ ನಡುವೆ 303 ಮಿಲಿಯನ್ ವೀಕ್ಷಣೆ ದಾಟಿದ ಪ್ರಧಾನಿ ಮೋದಿ ರೀಲ್ : ಬೆಂಬಲಿಗರಿಗೆ ಧನ್ಯವಾದ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ಕೇಂದ್ರದ ಭರವಸೆಯ ನಂತರ ಸೋನಮ್ ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹ ಅಂತ್ಯ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ದೆಹಲಿ ಪೊಲೀಸ್: ಪ್ರತಿಭಟನಾಕಾರರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಜಂತರ್ ಮಂತರ್‌ನಲ್ಲಿ ಪರಿಸ್ಥಿತಿ ಶಾಂತಿಯುತ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ಕರ್ನಾಟಕ ಪಶುವೈದ್ಯರ ನೇಮಕಾತಿಯಲ್ಲಿ ₹80 ಲಕ್ಷ ಲಂಚದ ಆರೋಪ; ಸ್ಟಿಂಗ್ ಆಪರೇಷನ್ ಸಾಕ್ಷ್ಯ ಬಿಡುಗಡೆ ಮಾಡಿದ ಆಕಾಂಕ್ಷಿ
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ತಪ್ಪು ಮಾಹಿತಿ ಅಭಿಯಾನದ ಬಗ್ಗೆ ದೆಹಲಿ ಪೊಲೀಸರ ಎಚ್ಚರಿಕೆ; 400ಕ್ಕೂ ಹೆಚ್ಚು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳ ಗುರುತು
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ  ರಿಜಿಜು ಮನವಿ
ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಸಂಸದೀಯ ಸಚಿವ ರಿಜಿಜು ಮನವಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ತ್ವರಿತಗತಿ ನ್ಯಾಯಾಲಯ; ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ಮುಂದಿನ ವರ್ಷದಿಂದ ನೀಟ್ ಸಂಪೂರ್ಣ ಡಿಜಿಟಲ್ ಆಗಲಿದೆ: ಧರ್ಮೇಂದ್ರ ಪ್ರಧಾನ್
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ
ದೆಹಲಿಯಲ್ಲಿ ಪ್ರತಿಭಟನೆಯ ವೇಳೆ ಹಲವು ಪತ್ರಕರ್ತರ ಮೇಲೆ ಹಲ್ಲೆ ಆರೋಪ; ಪೊಲೀಸರಿಂದ ತನಿಖೆ

ನ್ಯೂಸ್ MORE NEWS...