Sat,Oct18,2025
ಕನ್ನಡ / English

ಏಪ್ರಿಲ್ 3 ರಂದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ ಅಂಬರೀಷ್ | JANATA NEWS

30 Mar 2024

ಮಂಡ್ಯ : ಏಪ್ರಿಲ್ 3 ರಂದು ಮತ್ತೊಮ್ಮೆ ಬೆಂಬಲಿಗರೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

ಬಿಜೆಪಿಯಂತೆ ಕಾಂಗ್ರೆಸ್​​ನಿಂದಲೂ ಪಕ್ಷ ಸೇರ್ಪಡೆಗೆ ಆಹ್ವಾನ ಬಂದಿರುವುದು ಸತ್ಯ. ಆದರೆ ನನ್ನ ನಿರ್ಧಾರ ಆ ಪಕ್ಷಕ್ಕೋ, ಈ ಪಕ್ಷಕ್ಕೋ ಅಂತ ನೋಡಿಕೊಂಡು ಮಾಡಲ್ಲ. ಮಂಡ್ಯದ ಜನತೆ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳುತ್ತೇನೆ. ಏಪ್ರಿಲ್ 3ರ ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್​​ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ನನಗೆ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ಆಫರ್ ನೀಡಿತ್ತು, ಆದರೆ ಮಂಡ್ಯದ ಜನರೇ ನನಗೆ ಶಕ್ತಿ.ಮಂಡ್ಯ ಜನ ಯಾವುದನ್ನೂ ಲೆಕ್ಕಿಸದೆ ಅಂಬರೀಶ್ ಅವರ ಮೇಲಿಟ್ಟಿರುವ ಪ್ರೀತಿಯಿಂದ ಕಳೆದ ಚುನಾವಣೆಯಲ್ಲಿ ಪ್ರಭಾವಿಗಳ ಬೆಂಬಲವಿಲ್ಲದೆ ನಾನು ಗೆಲುವು ಸಾಧಿಸಲು ಸಾಧ್ಯವಾಯಿತು ಎಂದರು.

ಇಲ್ಲಿಯವರೆಗೆ ನಾನು ನುಡಿದಂತೆ ನಡೆದುಕೊಂಡಿದ್ದೇನೆ. ಮಂಡ್ಯಕ್ಕೆ ಕೈಲಾದಷ್ಟು ಪ್ರಾಮಾಣಿಕ ಸೇವೆ ಮಾಡಿ ಜಿಲ್ಲೆಯ ಘನತೆಯನ್ನು ಸಂಸತ್ತಿನಲ್ಲೂ​ ಎತ್ತಿ ಹಿಡಿದಿದ್ದೇನೆ. ಮಂಡ್ಯದೊಂದಿಗೆ ನನ್ನದು ಕೇವಲ ರಾಜಕೀಯ ಸಂಬಂಧವಲ್ಲ, ಭಾವನೆ ಮತ್ತು ಪ್ರೀತಿ ಇದೆ. ನನ್ನ ಸ್ವಾರ್ಥ ಅನ್ನವುದಾದರೆ ನನಗೆ ಮಂಡ್ಯವೇ ಬೇಕು ಎಂದರು.

ನನಗೆ ಎಲ್ಲ ಪಕ್ಷಗಳಿಂದಲೂ ಆಹ್ವಾನ ಬರುತ್ತಿದೆ, ಫೋನ್ ಕಾಲ್ ಬರುತ್ತಿದೆ ಎಂದು ಕಾಂಗ್ರೆಸ್​​ನಿಂದ ಪಕ್ಷ ಸೇರ್ಪಡೆ ಆಹ್ವಾನ ಇದೆ ಅಂತ ಒಪ್ಪಿಕೊಂಡ ಸುಮಲತಾ, ನಾರಾಯಣಗೌಡರಿಗೆ ಎಲ್ಲವೂ ಗೊತ್ತಿದೆ. ಎಲ್ಲ ಪ್ರಶ್ನೆಗಳಿಗೂ 3ನೇ ತಾರೀಕಿನಂದು ಉತ್ತರ ಸಿಗುತ್ತದೆ. ಏಪ್ರಿಲ್ 3ರಂದು ಯಾವಾಗ, ಎಲ್ಲಿ ಸಭೆ ಅಂತ ತಿಳಿಸುತ್ತೇವೆ. ನನ್ನ ನಿರ್ಧಾರ ಯಾವ ಪಕ್ಷಕ್ಕೆ ಅನುಕೂಲ ಆಗಲಿದೆ ಎನ್ನುವುದಕ್ಕಿಂತ, ಅಂಬಿ ಅಭಿಮಾನಿಗಳ ಭವಿಷ್ಯ ದೃಷ್ಟಿಯಲ್ಲಿರಿಸಿಕೊಂಡು ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

RELATED TOPICS:
English summary :I will announce the final decision on 3rd April: Sumalta Ambarish

ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ಆಪರೇಷನ್ ಸಿಂಧೂರ್ ಆಟದ ಮೈದಾನದಲ್ಲಿ - ಪ್ರಧಾನಿ ಮೋದಿ ಪೋಸ್ಟ್ ನ್ನು ಶ್ಲಾಘಿಸಿದ ಸೂರ್ಯಕುಮಾರ ಯಾದವ್
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನವನ್ನು ಭಯೋತ್ಪಾದನೆಯ ಜಾಗತಿಕ ಕೇಂದ್ರಬಿಂದು ಎಂದು ಕರೆದ - ವಿದೇಶಾಂಗ ಮಂತ್ರಿ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಚಾಮುಂಡಿ ಬೆಟ್ಟದ ಪಾದದ ಬಳಿಯ ರುದ್ರಭೂಮಿಯಲ್ಲಿ ನೆರವೇರಿದ ಡಾ. ಎಸ್.ಎಲ್.ಭೈರಪ್ಪ ಅಂತ್ಯಕ್ರಿಯೆ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ
ಲೇಹ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ : ಪ್ರಚೋದನಕಾರಿ ಭಾಷಣ ನೀಡಿದ್ದ ವಾಂಗ್‌ಚುಕ್ ಬಂಧನ

ನ್ಯೂಸ್ MORE NEWS...