ಹಿರಿಯ ನಟ ಮನ್ದೀಪ್ ರಾಯ್ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು | Filmz news
: ಪ್ರಸಿದ್ಧ ಹಾಸ್ಯ ನಟ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂರು ದಿನಗಳ ಹಿಂದೆ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನೂರಾರು ಹಾಸ್ಯ ಪಾತ್ರಗಳ ಮೂಲಕ ಅವರು ಜನರನ್ನು ರಂಜಿಸಿದ್ದಾರೆ. ಅನಂತ್ ನಾಗ್, ಶಂಕರ್ ನಾಗ್, ಡಾ. ರಾಜ್ಕುಮಾರ್ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ.
ಮಂದೀಪ್ ರಾಯ್ ಪುತ್ರಿ ಮಾತನಾಡಿ, ನಮ್ಮ ತಂದೆಗೆ ಹೃದಯಾಘಾತವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಅವರಿಗೆ ಹಾರ್ಟ್ ಸರ್ಜರಿ ಮಾಡಬೇಕೆ ಅಥವಾ ಸ್ಟಂಟ್ ಹಾಕಿಸಬೇಕಾ ಅಂತ ನಮ್ಮ ಕುಟುಂಬದವರು ವೈದ್ಯರ ಜೊತೆ ಚರ್ಚೆ ಮಾಡುತ್ತೇವೆ. ಅವರಿಗೆ ವಯಸ್ಸಾಗಿರೋ ಕಾರಣ ವೈದ್ಯರ ಸಲಹೆಯಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದಿದ್ದಾರೆ.