ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಪೋಸ್ಟ್ ವೈರಲ್! | Filmz news
![God who kills, can not change the mind? The post went viral!](2023/January/Jimg/1672747437.jpg)
: ಕಾಂತಾರ ಸಿನಿಮಾ ದಲ್ಲಿ ಫಾರೆಸ್ಟ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ಕಿಶೋರ್ ಇದೀಗ ಸುದ್ದಿಯಲ್ಲಿದ್ದಾರೆ.
ಅದಕ್ಕೆ ಕಾರಣ ಅವರು ಹಾಕಿರುವ ಒಂದು ಪೋಸ್ಟ್. ಇತ್ತೀಚಿಗೆ ವಾಟ್ಯ್ಸಾಪ್ನಲ್ಲಿ ಕಾಂತಾರ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಎಂಬ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕಿಶೋರ್ ಪ್ರತಿಕ್ರಿಯಿಸಿ, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ??
ಕಾಂತಾರದ ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ ಹರಿದು ಬಂತು. ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ.ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ.
ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ. ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಬೇಡ ಎಂದು ಬರೆದುಕೊಂಡಿದ್ದಾರೆ.
ಕಿಶೋರ್ ಅವರ ಈ ಪೋಸ್ಟ್ ಗೆ ಸಾಕಷ್ಟು ಪರ-ವಿರೋಧ ಪ್ರತಿಕ್ರಿಯೆಗಳು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಕ್ತವಾಗುತ್ತಿವೆ.
![](https://www.janata.news/ads/2-My-Mask-web-banner-kan.jpg)